Connect with us

Dvgsuddi Kannada | online news portal | Kannada news online

ನಾಳೆಯಿಂದ ಶಿವಮೊಗ್ಗ ಲಾಕ್ ಡೌನ್

ಜಿಲ್ಲಾ ಸುದ್ದಿ

ನಾಳೆಯಿಂದ ಶಿವಮೊಗ್ಗ ಲಾಕ್ ಡೌನ್

ಡಿವಿಜಿ ಸುದ್ದಿ, ಶಿವಮೊಗ್ಗ: ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು  ನಾಳೆಯಿಂದ  ಮಧ್ಯಾಹ್ನ 2 ಗಂಟೆಯಿಂದ ಶಿವಮೊಗ್ಗ ಸಂಪೂರ್ಣ ಲಾಕ್‌ಡೌನ್‌ ಘೋಷಿಸಲಾಗಿದೆ.

ಪ್ರತಿ ದಿನ ಬೆಳಿಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಜನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಮಧ್ಯಾಹ್ನ 2ರ ನಂತರ ಅಗತ್ಯ ವಸ್ತು ಹೊರತುಪಡಿಸಿ ಅಂಗಡಿ, ಮುಂಗಟ್ಟುಗಳು ಲಾಕ್ ಆಗಲಿವೆ. ಕಠಿಣ ಲಾಕ್‌ಡೌನ್ ಜಾರಿಗೊಳಿಸಲು ಪೊಲೀಸರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವಪ್ಪ ಹೇಳಿದರು.

ಯಾವುದೇ ಹಬ್ಬ ಆಚರಣೆಗೆ ಅವಕಾಶವಿಲ್ಲ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡ ಕಟ್ಟುನಿಟ್ಟಿನಿಂದ ಪಾಲಿಸಬೇಕು. ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಗೂಡುವುದು, ಮಾಸ್ಕ್ ಧರಿಸದೇ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ಧಾರೆ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top