ಡಿವಿಜಿ ಸುದ್ದಿ, ಶಿವಮೊಗ್ಗ: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಸಿ.ಎಂ.ಯಡಿಯೂರಪ್ಪ ಅವರ ಆಪ್ತ ಕೆ.ಎಸ್.ಗುರುಮೂರ್ತಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕಚೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ವಿಧಾನಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ಸಿ.ಎಂ. ಯಡಿಯೂರಪ್ಪ ಪುತ್ರಿ ಅರುಣಾದೇವಿ, ಶಾಸಕ ರುದ್ರೇಗೌಡ, ಹಾಲಪ್ಪ ಅವರು ಉಪಸ್ಥಿತರಿದ್ದರು.
ನಂತರ ಮಾತನಾಡಿದ ಅವರು, ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪರಿಸರ ಉಳಿಸಿಕೊಂಡು ಪರಿಸರಕ್ಕೆ ಹಾನಿಯಾಗದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ವ್ಯಾಪ್ತಿ ದೊಡ್ಡದಾಗಿದೆ. ಕೊರೊನಾ ಬಿಕ್ಕಟ್ಟಿನಿಂದಾಗಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಯವರಾಗಿದ್ದು, ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡುತ್ತೇನೆ. ಮರಗಳ ಸಂರಕ್ಷಣೆ, ಗಿಡ ನೆಡುವ ಕಾರ್ಯಕ್ಕೆ ಒತ್ತು ನೀಡಲಾಗುವುದು, ಪರಿಸರಕ್ಕೆ ಹಾನಿಯಾಗದಂತೆ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುವುದು. ಎಂದರು.



