Connect with us

Dvgsuddi Kannada | online news portal | Kannada news online

ಶಿವಮೊಗ್ಗದಲ್ಲಿ ಕೊರೊನಾಗೆ ಮೊದಲ ಬಲಿ

ಜಿಲ್ಲಾ ಸುದ್ದಿ

ಶಿವಮೊಗ್ಗದಲ್ಲಿ ಕೊರೊನಾಗೆ ಮೊದಲ ಬಲಿ

ಡಿವಿಜಿ ಸುದ್ದಿ, ಶಿವಮೊಗ್ಗ: ಕೊರೊನಾ ಮಹಾಮಾರಿಗೆ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.  ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದ ಮೊದಲ ಘಟನೆ ಇದಾಗಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದ 70 ವರ್ಷದ ವೃದ್ಧೆ ಮೂಲವ್ಯಾಧಿ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆಂದು ಕಳೆದ ಮೂರು ದಿನದ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ಸ್ವತಃ ಅವರೇ ಆಗಮಿಸಿ ಚಿಕಿತ್ಸೆಗೆ ದಾಖಲಾಗಿದ್ದರು.

ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಆದರೆ ಈ ವೃದ್ಧೆ ಸಾವನ್ನಪ್ಪುವ ಮೊದಲೇ ಇವರಿಗೆ ಕೋವಿಡ್ 19 ತಪಾಸಣೆ ಸಹ ನಡೆಸಲಾಗಿತ್ತು. ವೃದ್ಧೆ ಮೃತಪಟ್ಟ ನಂತರ ಕೋವಿಡ್-19 ವರದಿ ಬಂದಿದ್ದು, ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top