ಡಿವಿಜಿ ಸುದ್ದಿ, ಬೆಂಗಳೂರು: ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ.
ಅತಿವೃಷ್ಟಿ ಬಗ್ಗೆ @PMOIndia ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ.
ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ.
ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು.
1/10#FailedFloodMGmt— Siddaramaiah (@siddaramaiah) August 10, 2020
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು, ಪ್ರಧಾನಿ ಮುಂದೆ ರಾಜ್ಯ ಸರ್ಕಾರ ಮಂಡಿಸಬೇಕಾದ ಅಂಶಗಳನ್ನು ಪಟ್ಟಿ ಮಾಡಿದ್ದಾರೆ. ಪ್ರಧಾನಿ ಮೋದಿ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್.ಅಶೋಕ್ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
.@PMOIndia ನಡೆಸುವ
ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ @BSBommai ಮತ್ತು @RAshokaBJP ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.
2/10#FailedFloodMGmt— Siddaramaiah (@siddaramaiah) August 10, 2020
ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ 1,00,000 ಕೋಟಿ. ರಾಜ್ಯ ಸರ್ಕಾರದ ವರದಿ ಪ್ರಕಾರ ನಷ್ಟ-50,000 ಕೋಟಿ. ಪರಿಹಾರ ಕೇಳಿದ್ದು 35,000 ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ರೂ.1,00,000 ಕೋಟಿ
ರಾಜ್ಯಸರ್ಕಾರದ ವರದಿ ಪ್ರಕಾರ ನಷ್ಟ- ರೂ50,000 ಕೋಟಿ.ಪರಿಹಾರ ಕೇಳಿದ್ದು
ರೂ.35,000 ಕೋಟಿ.ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ.
ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ.
3/10#FailedFloodMGmt— Siddaramaiah (@siddaramaiah) August 10, 2020
ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ @PMOIndia ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು.
ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು.
8/10#FailedFloodMGmt— Siddaramaiah (@siddaramaiah) August 10, 2020
.@PMOIndia ಅವರ ಜೊತೆಗಿನ ರಾಜ್ಯದ ಸಚಿವರವ ಸಭೆ ಕಾಟಾಚಾರದ ಕಸರತ್ತು ಆಗಬಾರದು.
@CMofKarnataka ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಿ @PMOIndia ಅವರಿಗೆ ಕಳಿಸಿಕೊಟ್ಟು ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.
9/10#FailedFloodMGmt— Siddaramaiah (@siddaramaiah) August 10, 2020



