Connect with us

Dvgsuddi Kannada | online news portal | Kannada news online

ಪ್ರಧಾನಿ ಮುಂದೆ ರಾಜ್ಯ ಸರ್ಕಾರ ಧೈರ್ಯವಾಗಿ ನೆರೆ ಪರಿಹಾರ ಕೇಳಲಿ: ಸಿದ್ದರಾಮಯ್ಯ

ಪ್ರಮುಖ ಸುದ್ದಿ

ಪ್ರಧಾನಿ ಮುಂದೆ ರಾಜ್ಯ ಸರ್ಕಾರ ಧೈರ್ಯವಾಗಿ ನೆರೆ ಪರಿಹಾರ ಕೇಳಲಿ: ಸಿದ್ದರಾಮಯ್ಯ

ಡಿವಿಜಿ ಸುದ್ದಿ, ಬೆಂಗಳೂರು: ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ‌ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ  ಅವರು,  ಪ್ರಧಾನಿ ಮುಂದೆ ರಾಜ್ಯ ಸರ್ಕಾರ ಮಂಡಿಸಬೇಕಾದ  ಅಂಶಗಳನ್ನು ಪಟ್ಟಿ ಮಾಡಿದ್ದಾರೆ. ಪ್ರಧಾನಿ ಮೋದಿ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್‌.ಅಶೋಕ್‌ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ 1,00,000 ಕೋಟಿ. ರಾಜ್ಯ ಸರ್ಕಾರದ ವರದಿ ಪ್ರಕಾರ ನಷ್ಟ-50,000 ಕೋಟಿ. ಪರಿಹಾರ ಕೇಳಿದ್ದು 35,000 ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top