Connect with us

Dvgsuddi Kannada | online news portal | Kannada news online

ನಿಯಮ ಉಲ್ಲಂಘಿಸಿದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ಬಿತ್ತು 50 ಸಾವಿರ ದಂಡ..!

ಪ್ರಮುಖ ಸುದ್ದಿ

ನಿಯಮ ಉಲ್ಲಂಘಿಸಿದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ಬಿತ್ತು 50 ಸಾವಿರ ದಂಡ..!

ಡಿವಿಜಿ ಸುದ್ದಿ, ಬೆಂಗಳೂರು: ಭಾನುವಾರ ನಡೆದ ಭಾರತಆಸ್ಟ್ರೇಲಿಯಾ ನಡುವೆ ನಡೆದ 3ನೇ ಏಕದಿನ ಕ್ರಿಕೆಟ್ ಪಂದ್ಯದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಪ್ಲಾಸ್ಟಿಕ್ ಬಳಸಿ ನಿಯಮ ಉಲ್ಲಂಘಿಸಿದ್ದರ ಪರಿಣಾಮ ಬಿಬಿಎಂಪಿ ಕೆಎಸ್ಸಿಎ(ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್) ಗೆ 50 ಸಾವಿರ ದಂಡ ವಿಧಿಸಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯಾಗಿದ್ದು, ಹಿನ್ನೆಲೆಯಲ್ಲಿ ಬಿಬಿಎಂಪಿ ಕೆಎಸ್ಸಿಎಗೆ 50 ಸಾವಿರ ರೂ. ದಂಡ ವಿಧಿಸಿದೆ. ಪ್ಲಾಸ್ಟಿಕ್ ಕಪ್, ಬ್ಯಾನರ್ ಬಳಸಿರುವುದಕ್ಕೆ ಕೆಎಸ್ ಸಿಎಗೆ ಆರೋಗ್ಯಾಧಿಕಾರಿ ದಂಡ ವಿಧಿಸಿದ್ಧಾರೆ. ಇಂತಹ ಘಟನೆ ಮತ್ತೆ ಮರುಕಳಿಸದಂತೆ ಸೂಚನೆ ನೀಡಲಾಗಿದೆ.

ಭಾನುವಾರ ಪಂದ್ಯ ನಡೆಯುವ ವೇಳೆ ಪೂರ್ವ ವಲಯದಲ್ಲಿ ಉಪ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದಾಗ ಪ್ಲಾಸ್ಟಿಕ್ ಕಪ್ಸ್, ಫ್ಲೆಕ್ಸ್, ಬ್ಯಾನರ್ ಬಳಸಿರುವುದು ಕಂಡು ಬಂದಿದೆ. ಹೀಗಾಗಿ ಕೆಎಸ್ಸಿಎಗೆ 50 ಸಾವಿರ ರೂ. ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ತಮ್ಮ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top