ಕ್ರೈಸ್ಟ್ ಚರ್ಚ್: ಟೀಮ್ ಇಂಡಿಯಾದ ಬ್ಯಾಟಿಂಗ್ ವೈಫಲ್ಯದಿಂದ ಕಂಗೆಟ್ಟಿರುವ ಇಂಡಿಯಾ ನ್ಯೂಜಿಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಸೋಲು ಕಂಡಿದೆ. ಈ ಮೂಲಕ ನ್ಯೂಜಿಲೆಂಡ್ ಸರಣಿ ಕ್ಲೀನ್ ಸ್ವೀಪ್ ಮಾಡಿದೆ.
Congratulations to New Zealand on winning the Test series. #NZvIND
Details👉 https://t.co/VTLQt4iEFz pic.twitter.com/gNq2DGHxWm
— BCCI (@BCCI) March 2, 2020
ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 242 ರನ್ ಗಳಿಸಿತ್ತು. ನ್ಯೂಜಿಲೆಂಡ್ ಇನ್ನಿಂಗ್ಸ್ ನಲ್ಲಿ 235ರನ್‌ಗಳಿಗೆ ಆಲೌಟ್ ಆಗಿತ್ತು. 7 ರನ್ ಗಳ ಮುನ್ನಡೆ ಪಡೆದ ಟೀಮ್ ಇಂಡಿಯಾ ಎರಡನೇ ಇಂನ್ನಿಂಗ್ಸ್ ನಲ್ಲಿ ಬ್ಯಾಟ್ಸ್ ಮ್ಯಾನ್ ಗಳ ವೈಫಲ್ಯದಿಂದ ಭಾನುವಾರ 36 ಓವರ್‌ಗಳಲ್ಲಿ 90 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು.
ಸೋಮವಾರ 97 ರನ್‌ಗಳೊಂದಿಗೆ ಬ್ಯಾಟಿಂಗ್ ಆರಂಭಿಸಿದ ಭಾರತ 124ರನ್‌ಗಳಿಗೆ ಸರ್ವ ಪತನ ಕಂಡಿತು. 132ರನ್‌ಗಳ ಗುರಿಯನ್ನು ನ್ಯೂಜಿಲೆಂಡ್ 36 ಓವರ್‌ಗಳಲ್ಲಿ 3 ವಿಕೆಟ್ ನಷ್ಟದೊಂದಿಗೆ ಯಶಸ್ವಿಯಾಗಿ ಪೂರ್ಣಗೊಳಿಸಿ ಸರಣಿ ವಶಪಡಿಸಿಕೊಂಡಿತು.

ನ್ಯೂಜಿಲೆಂಡ್ ವಿರುದ್ಧದ ಎರಡೂ ಟೆಸ್ಟ್ ಪಂದ್ಯಗಳಲ್ಲಿಯೂ ಸೋಲುವ ಮೂಲಕ ಟೀಮ್ ಇಂಡಿಯಾ ಸರಣಿ ಸೋಲು ಅನುಭವಿಸಿದೆ. ಇನ್ನು ಏಕದಿನ ಪಂದ್ಯದಲ್ಲಿಯೂ ಟೀಮ್ ಇಂಡಿಯಾವನ್ನು ಮೂರು ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್ ಕ್ಲಿನ್ ಸ್ವೀಪ್ ಮಾಡಿತ್ತು. ಆದರೆ, 5 ಪಂದ್ಯಗಳ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಕ್ಲಿನ್ ಸ್ವೀಪ್ ಮಾಡಿತ್ತು.



