ಡಿವಿಜಿಸುದ್ದಿ.ಕಾಂ, ದಾವಣಗೆರೆ: ವಿದ್ಯಾರ್ಥಿಗಳು ಓದಿನ ಆಸಕ್ತಿ ಜೊತೆಗೆ ಮತ್ತು ಕ್ರೀಡೆಯಲ್ಲಿಯೂ ಭಾಗವಹಿಸುವ ಮೂಲಕ ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ಖೋ ಖೋ ತರಬೇತುದಾರ ಜಿ.ರಾಮಲಿಂಗಪ್ಪ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಎಆರ್ ಎಂ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ದಾವಣಗೆರೆ ವಿಶ್ವವಿದ್ಯಾಲಯ, ದೈಹಿಕ ಶಿಕ್ಷಣ ನಿರ್ದೇಶಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ವಿವಿ ಅಂತರ್ ಕಾಲೇಜುಗಳ ಪುರುಷರ ಖೋ ಖೋ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಓದಿನ ಜತೆಗೆ ಕ್ರೀಡೆಯನ್ನು ಸಮಾನವಾಗಿ ಸ್ವೀಕರಿಸಿದಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎಸ್. ರಾಜಕುಮಾರ್ ಮಾತನಾಡಿ, ಕ್ರೀಡೆ ಜತೆಗೆ ಸ್ವರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಒತ್ತು ನೀಡಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ದಾವಣಗೆರೆ ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಸಂಘದ ಅಧ್ಯಕ್ಷ ಪ್ರೊ.. ನಾಗಭೂಷಣ ಮಾತನಾಡಿ, ಖೋ ಖೋ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಾಗಬೇಕಿತ್ತು. ದುರಂತವೆಂದರೆ ಖೋ ಖೋ ವನ್ನು ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದಿಲ್ಲ.ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಖೋ ಖೋ ಪಂದ್ಯಗಳು ನಡೆಯುವಂತೆ ಆಗಬೇಕು ಎಂದರು.
ದೈಹಿಕ ಶಿಕ್ಷಣ ಸಂಘದ ನಿರ್ದೇಶಕ ಹೆಚ್.ತಿಪ್ಪೇಸ್ವಾಮಿ ಮಾತನಾಡಿ, ಖೋ ಖೋ ಗ್ರಾಮೀಣ ಕ್ರೀಡೆ. ಚೆನ್ನಾಗಿ ಓದ ಬಲ್ಲವರಿಗೆ ಈ ಕ್ರೀಡೆ ಬಹಳ ಸೂಕ್ತ. ಈ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳು ಸಾಧ್ಯವಿದೆ ಎಂದರು.
ಕ್ರೀಡಾಕೂಟದಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗದಿಂದ ೯ ತಂಡಗಳು ಭಾಗವಹಿಸಿದ್ದವು. ಈ ಸಂದರ್ಭದಲ್ಲಿ ಎಆರ್ ಎಂ ಪ್ರಥಮ ದರ್ಜೆ ಕಾಲೇಜಿನ ಪಾಂಶುಪಾಲ ಪ್ರೊ. ಡಿ.ಎಚ್. ಪ್ಯಾಟಿ ಬಸವರಾಜ, ಚಂದ್ರಶೇಖರ್, ಕಾಡಜ್ಜಿ ಶಿವಪ್ಪ ಇತ್ತಿತರರು ಉಪಸ್ಥಿತರಿದ್ದರು.



