ಡಿವಿಜಿ ಸುದ್ದಿ, ಬೆಂಗಳೂರು: ಕರ್ನಾಟಕದ ಆಟಗಾರರ ಶಿಸ್ತು ಬದ್ಧ ಬೌಲಿಂಗ್ ಹಾಗೂ ಬ್ಯಾಟಿಂಗಿನಲ್ಲಿ ತೋರಿದ ಉತ್ತಮ ಪ್ರದರ್ಶನದಿಂದ ಬರೋಡ ತಂಡದ ಎದುರು 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿತು. ಈ ಮೂಲಕ 2019-20 ನೇ ಸಾಲಿನ ರಣಜಿ ಟೂರ್ನಿಯಲ್ಲಿ ಕರ್ನಾಟಕ ಕ್ವಾಟರ್ ಫೈನಲ್ ಪ್ರವೇಶ ಪಡೆದುಕೊಂಡಿತು.
ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬರೋಡಾ ನೀಡಿದ್ದ 149 ರನ್‍ಗಳ ಗೆಲುವಿನ ಗುರಿ ಬೆನ್ನಟ್ಟಿದ ಕರ್ನಾಟಕದ ತಂಡವು ಎರಡು ವಿಕೆಟ್ ನಷ್ಟಕ್ಕೆ ಗುರು ತಲುಪುವ ಮೂಲಕ ಭರ್ಜರಿ ಜಯ ದಾಖಲಿಸಿತು.
Victory 🤳 by Krishnappa Gowtham.
PC: KSCA. #RanjiTrophy #KARvBDA pic.twitter.com/FPleGOeRG2
— Karnataka Ranji Team║ಕರ್ನಾಟಕ ರಣಜಿ ತಂಡ (@RanjiKarnataka) February 14, 2020
ಮೊದಲ ಇನ್ನಿಂಗ್ಸ್ ಬರೋಡಾ ಕೇಲವ 85 ರನ್‍ಗಳಿಗೆ ಆಲೌಟ್ ಆಗಿತ್ತು. ಕರ್ನಾಟಕದ ವೇಗಿ ಅಭಿಮನ್ಯು ಮಿಥುನ್ ಹಾಗೂ ಸ್ಪಿನ್ನರ್ ಕೃಷ್ಣಪ್ಪ ಗೌತಮ್ ತಲಾ ಮೂರು ವಿಕೆಟ್ ಪಡೆದಿದ್ದರು. ಪ್ರಸಿದ್ಧ ಕೃಷ್ಣ 2 ವಿಕೆಟ್ ಹಾಗೂ ಶ್ರೇಯಸ್ ಗೋಪಾಲ್ ಒಂದು ವಿಕೆಟ್ ಪಡೆದಿದ್ದರು. ಕರ್ನಾಟಕ ಮೊದಲ ಇನ್ನಿಂಗ್ಸ್ 233 ರನ್ ಹಾಲೆಹಾಕಿ 148 ರನ್‍ಗಳ ಮಹತ್ವದ ಮುನ್ನಡೆ ದಾಖಲಿಸಿತ್ತು. ಇನ್ನು ದ್ವಿತೀಯ ಇನ್ನಿಂಗ್ಸ್ ನಲ್ಲಿ ಬರೋಡಾ ತಂಡವು ಎಲ್ಲಾ ವಿಕೆಟ್ ಕಳೆದುಕೊಂಡು 296 ರನ್ ಗಳಿಸಿತ್ತು. ಕರ್ನಾಟಕ ತಂಡದ ಬೌಲರ್ ಪ್ರಸಿದ್ಧ ಕೃಷ್ಣ ನಾಲ್ಕು ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ರೋನಿತ್ ಮೋರೆ 3 ವಿಕೆಟ್, ಕೃಷ್ಣಪ್ಪ ಗೌತಮ್ 2 ವಿಕೆಟ್ ಹಾಗೂ ಅಭಿಮನ್ಯು ಮಿಥುನ್ ಒಂದು ವಿಕೆಟ್ ಕಪಡೆದು ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
ಕರ್ನಾಟದ ದ್ವಿತಿಯ ಇನ್ನಿಂಗ್ಸ್ ನಲ್ಲಿ ನಾಯಕ ಕರುಣ್ ನಾಯರ್ ಔಟಾಗದೆ 71 ರನ್ (126 ಎಸೆತ, 7 ಬೌಂಡರಿ) ಹಾಗೂ ಕೃಷ್ಣಮೂರ್ತಿ ಸಿದ್ದಾರ್ಥ್ ಔಟಾಗದೆ 29 ರನ್ (68 ಎಸೆತ 3 ಬೌಂಡರಿ, 1 ಸಿಕ್ಸ್) ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು. ಈವರೆಗೆ ಕರ್ನಾಟಕ ಎಂಟು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ದಾಖಲಿಸಿದ್ದು, ನಾಲ್ಕು ಪಂದ್ಯಗಳು ಡ್ರಾ ಫಲಿತಾಂಶ ಕಂಡಿವೆ. ಕರ್ನಾಟಕ ತಂಡವು ಒಟ್ಟು 31 ಅಂಕಗಳೊಂದಿಗೆ ಎಂಟರ ಘಟ್ಟಕ್ಕೆ ಪ್ರವೇಶಿಸಿದ್ದು, ಅಂಕಪಟ್ಟಿಯಲ್ಲಿ ಸದ್ಯಕ್ಕೆ ಎರಡನೇ ಸ್ಥಾನಕ್ಕೆ ನೆಗೆದಿದೆ. 8 ಪಂದ್ಯವಾಡಿರುವ ಬಂಗಾಳ 32 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದೆ. ಜಮ್ಮು ಕಾಶ್ಮೀರದ ವಿರುದ್ಧ ಕರ್ನಾಟಕ ಕ್ವಾರ್ಟರ್ ಫೈನಲ್ ಆಡಲಿದೆ.
ಸ್ಕೋರ್ ವಿವರ:
ಬರೋಡಾ ಮೊದಲ ಇನ್ನಿಂಗ್ಸ್: 85/10
ಕರ್ನಾಟಕ ಮೊದಲ ಇನ್ನಿಂಗ್ಸ್: 233/10
ಬರೋಡಾ ದ್ವಿತೀಯ ಇನ್ನಿಂಗ್ಸ್: 296/10
ಕರ್ನಾಟಕ ದ್ವಿತೀಯ ಇನ್ನಿಂಗ್ಸ್: 150/2



