ಡಿವಿಜಿ ಸುದ್ದಿ, ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದತಿಗೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಾರಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳು ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ. ಆದ್ದರಿಂದ ಪರೀಕ್ಷೆ ರದ್ದು ಮಾಡಬೇಕು. ಇಲ್ಲವೇ ಎಲ್ಲರನ್ನೂ ಉತ್ತೀರ್ಣ ಮಾಡಬೇಕು ಎಂದು ಒತ್ತಾಯಿಸಿದರು.
9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರೊಂದಿಗೆ ಪೋಷಕರು ಬರಲಿದ್ದಾರೆ. ಹೊರಬರುವ ಲಕ್ಷಾಂತರ ಜನರ ರಕ್ಷಣೆ ಜವಾಬ್ದಾರಿ ಯಾರು ಎಂದು ಪ್ರಶ್ನಿಸಿದರು.ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿದ್ದಾರೆ. ಇಲ್ಲಿಯೂ ಹಾಗೆಯೇ ಮಾಡಬೇಕು ಎಂದು ಆಗ್ರಹಿಸಿದರು.
ಆನ್‌ಲೈನ್ ಶಿಕ್ಷಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಇದು ಪೋಷಕರ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂದರು.



