ಡಿವಿಜಿ ಸುದ್ದಿ, ಬೆಂಗಳೂರು: ಇಡೀ ದೇಶದಲ್ಲಿ ಲಾಕ್ ಡೌನ್ ಹಿನ್ನೆಲೆ ಮುಂದೂಡಲ್ಪಟ್ಟಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ವೇಳಾಪಟ್ಟಿ ಜೂನ್ ಎರಡನೆ ಅಥವಾ ಮೂರನೆ ವಾರದಲ್ಲಿ ಪ್ರಕಟವಾಗಲಿದ್ದು, ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಎಲ್ಲಿ ಬಯಸುತ್ತಾರೋ ಅದೇ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಶ ಅವಕಾಶ ನೀಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಜೂನ್ ತಿಂಗಳ ಎರಡನೆ ಅಥವಾ ಮೂರನೆ ವಾರದಲ್ಲಿ ಪ್ರಕಟಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ತಮ್ಮ ಅಧಿಕೃತ ಫೇಸ್ ಬುಕ್ ಲೈವ್ ನಲ್ಲಿ ಎಸ್.ಸುರೇಶ್‍ಕುಮಾರ್ ತಿಳಿಸಿದ್ದಾರೆ.
https://www.facebook.com/nimmasuresh/videos/3442052185822102/
ವಿದ್ಯಾರ್ಥಿಗಳು ಇಲ್ಲವೆ ಪೊಷಕರು ವೇಳಾಪಟ್ಟಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಶಿಕ್ಷಣ ಇಲಾಖೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಅವರು ಸ್ಪಷ್ಟಪಡಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಪರೀಕ್ಷಾ ಕೇಂದ್ರಗಳಿಗೆ ಬರುವ ಪ್ರತಿಯೊಬ್ಬರೂ (ವಿದ್ಯಾರ್ಥಿಗಳು ಸೇರಿದಂತೆ) ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಉಷ್ಣಾಂಶ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.
ಎಲ್ಲವೂ ನಿರೀಕ್ಷೆಯಂತೆ ನಡೆದರೆ ಜೂನ್ ತಿಂಗಳಿನಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆಯಾಗುವ ಸಂಭವವಿದೆ. ವೇಳಾಪಟ್ಟಿಯನ್ನು 10 ರಿಂದ 15 ದಿನ ಮುಂಚಿತವಾಗಿಯೇ ಪ್ರಕಟಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಶಿಕ್ಷಣ ಇಲಾಖೆ ಪ್ರಕಟಿಸುವ ವೇಳಾಪಟ್ಟಿಯೇ ಅಂತಿಮ ಎಂದರು.
ಶೇ.99ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ನಡೆಸಬೇಕೆಂದು ಮನವಿ ಮಾಡಿದರು. ನಾವು ಒಂದು ವರ್ಷ ಪಟ್ಟ ಪರಿಶ್ರಮಕ್ಕೆ ಫಲ ಸಿಗಬೇಕೆಂದರೆ ಪರೀಕ್ಷೆ ಮಾಡಲೇಬೇಕು. ಒಂದು ವೇಳೆ ಹಾಗೆಯೇ ಉತ್ತೀರ್ಣರಾದರೆ ನಮ್ಮನ್ನು ಕೊರೊನಾದಿಂದ ಉತ್ತೀರ್ಣರಾದರು ಎಂದು ಟೀಕೆ ಮಾಡುತ್ತಾರೆ. ಹೀಗಾಗಿ ಪರೀಕ್ಷೆ ನಡೆಸಬೇಕೆಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ ಎಂದು ತಿಳಿಸಿಸಿದ್ದಾರೆ.