ಡಿವಿಜಿ ಸುದ್ದಿ, ಬೆಂಗಳೂರು: ‘ಆಗಸ್ಟ್ ಮೊದಲ ವಾರದಲ್ಲಿ ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇನ್ನು 10 ದಿನದಲ್ಲಿ ಮೌಲ್ಯಮಾಪನ ಮುಗಿಯಲಿದೆ. ರಾಜ್ಯದಾದ್ಯಂತ 220 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಪ್ರಕ್ರಿಯೆ ಪೂರ್ಣಗೊಂಡಿದೆ.
ಮುಂದಿನ ಎರಡು ದಿನಗಳಲ್ಲಿ ಇನ್ನೂ 60 ಕೇಂದ್ರಗಳಲ್ಲಿ ಮುಗಿಯಲಿದೆ ಎಂದು ತಿಳಿಸಿದರು.