ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ಕರ್ನಾಟಕ ಲಾಕ್ ಡೌನ್ ಗೆ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಗಾವಿ, ಬೀದರ್, ಕಲಬುರ್ಗಿ, ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ , ಮಂಗಳೂರು, ಹಾವೇರಿ ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲಾ ಕೇಂದ್ರಗಳಲ್ಲಿ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪ್ರತಿದಿನ ವಾಹನ ಸಂಚಾರದಿಂದ ತುಂಬಿರುತ್ತಿದ್ದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ. ಹಾಲು , ಮೆಡಿಕಲ್ , ಆಸ್ಪತ್ರೆ ಹೊರತುಪಡಿಸಿ ಬಹುತೇಕ ಎಲ್ಲ ಬಂದ್ ಆಗಿದೆ. ನಿನ್ನೆ ಸಂಜೆ 8 ಗಂಟೆಯಿಂದ ಪ್ರಾರಂಭವಾಗಿರುವ ಲಾಕ್ ಡೌನ್ ನಾಳೆ ಬೆಳಗ್ಗೆ 5 ಗಂಟೆ ವರೆಗೆ ಇರಲಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ. ಇದರಲ್ಲಿ 9,244 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 11,966 ಪ್ರಕರಣಗಳು ಸಕ್ರಿಯವಾಗಿವೆ. 335 ಮಂದಿ ಮೃತಪಟ್ಟಿದ್ದಾರೆ.



