ಡಿವಿಜಿ ಸುದ್ದಿಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಪಡಿಸುವಂತೆ ಕೋರಿ ಬೆಳಗಾವಿಯ ರಾಜಶ್ರೀ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್, ಕೃಷ್ಣ ಮುರಾರಿ ಹಾಗೂ ಎಸ್.ರವೀಂದ್ರ ಭಟ್ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಅರ್ಜಿ ವಜಾ ಮಾಡಿದೆ. ಸರ್ಕಾರದ ನಿರ್ಧಾರದಲ್ಲಿ ಮಧ್ಯ ಪ್ರವೇಶ ಸರಿಯಲ್ಲ. ಈಗಾಗಲೇ ಈ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ ನ್ಯಾಯಪೀಠ ಹೇಳಿದೆ.
ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದರು.ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯ ಅನುಸಾರ ನಡೆಯಲಿದೆ.