ಡಿವಿಜಿ ಸುದ್ದಿ, ಬೆಂಗಳೂರು: ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸುತ್ತೂರು ಮಠದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನಗರದ ಮಲ್ಲೇಶ್ವರದ ವೆಗಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸಿದ್ದರಾಮಯ್ಯ ಆರೋಗ್ಯವಾಗಿದ್ದು ಜನರಲ್ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ತಂದೆಯ ಆರೋಗ್ಯದ ಕುರಿತು ಧೈರ್ಯ ತುಂಬಿರುವುದಾಗಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಹೇಳಿದ್ದಾರೆ. ನಿನ್ನೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ಕೆ.ಎಸ್. ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಭೇಟಿ ಆರೋಗ್ಯ ವಿಚಾರಿಸಿದ್ದರು.



