ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಸಚಿವ ಭೈರತಿ ಬಸವರಾಜ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಮಕ್ಕಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಪಾತ್ರ ದೊಡ್ಡದು  ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಹೇಳಿದರು.

ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇಶವು ಮುಂದುವರೆಯಲು ಮತ್ತು ಪ್ರಗತಿಯತ್ತ ಸಾಗಲು ಶಿಕ್ಷಕರೇ ಕಾರಣ. ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ ಹಾಗೂ ಅರಿವುಗಳನ್ನು ಬೆಳೆಸುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಆ ಮೂಲಕ ತಮ್ಮ ಕಾರ್ಯವನ್ನು ಬಹಳಷ್ಟು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದರು.

ರಾಧಾಕೃಷ್ಣನ್ ಅವರನ್ನು ಸ್ಮರಿಸಲು ಈ ದಿನ ವಿಶೇಷವಾಗಿದೆ. ಒಬ್ಬ ಶಿಕ್ಷಕರಾಗಿ, ಶಿಕ್ಷಣ ತಜ್ಞರಾಗಿ ಅವರ ಕೊಡುಗೆ ಅಪಾರವಾಗಿದ್ದು, ಶಿಕ್ಷಣ ಕ್ಷೇತ್ರವನ್ನು ಬಹಳ ಎತ್ತರ ಸ್ಥಾನಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಜೊತೆಗೆ ಹಲವಾರು ಹುದ್ದೆ ಅಲಂಕರಿಸುವ ಮೂಲಕ ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆ ಹೆಚ್ಚಿಸಿದ್ದಾರೆ ಎಂದು ತಿಳಿಸಿದರು.

teachers day 2

ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ಒಂದು ಕಲ್ಲು ಗರ್ಭಗುಡಿಯೊಳಗೆ ಹೋಗಿ ದೇವರಾಗಬೇಕಾದರೆ ಅದಕ್ಕೆ ಶಿಲ್ಪಿ ದೇವರ ರೂಪ ಕೊಡುತ್ತಾನೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಶಿಕ್ಷಕರಾದ ನೀವು ಅವರನ್ನು ತಿದ್ದಿ ಸಮಾಜದಲ್ಲಿ ಉನ್ನತ ವ್ಯಕ್ತಿಯಾಗಲು ಒಳ್ಳೆಯ ಮಾರ್ಗದರ್ಶನವೆಂಬ ರೂಪ ನೀಡಬೇಕು ಎಂದರು.

ಸರ್ವಪಲ್ಲಿ ರಾಧಕೃಷ್ಣನ್‍ನವರು ಸಾಮಾನ್ಯ ಶಿಕ್ಷಕರಾಗಿ ದೇಶದ ಅತ್ಯುನತ ರಾಷ್ಟ್ರಪತಿ ಹುದ್ದೆ ಅಲಂಕರಿಸಿದರು. ಅವರಂತೆ ಅಬ್ದುಲ್ ಕಲಾಂ, ಲಾಲ್ ಬಹದ್ದೂರ್ ಶಾಸ್ತ್ರಿಯವರು ಸಾಮಾನ್ಯ ಕುಂಟುಬದಲ್ಲಿ ಬೆಳೆದು ದೇಶಕ್ಕೆ ಹೆಸರು ತಂದಕೊಟ್ಟರು ಎಂದರು.

ಮಾಯಕೊಂಡ ಶಾಸಕ ಪ್ರೋ.ಲಿಂಗಣ್ಣ ಮಾತನಾಡಿ, ಶಿಕ್ಷಕ ವೃತ್ತಿ ಎಂಬುದು ಬಹಳ ಶ್ರೇಷ್ಠವಾದ ವೃತ್ತಿ. ನಾನು ಕೂಡ ಒಬ್ಬ ಶಿಕ್ಷಕ. ಸಮಾಜವು ಇಂದು ಬದಲಾವಣೆ ಆಗಬೇಕಾದರೆ ಶಿಕ್ಷಕನ ಪಾತ್ರ ಅತಿ ಮುಖ್ಯವಾಗಿದೆ. ಯಾವುದೇ ಬೇಧವಿಲ್ಲದೆ, ರಾಜಕೀಯ ಒತ್ತಡಕ್ಕೆ ಮಣಿಯದೆ ಎಲ್ಲ ವಿದ್ಯಾರ್ಥಿಗಳನ್ನು ತಿದ್ದುವ ಕೆಲಸ ಶಿಕ್ಷಕರು ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ನಾನು ಕೂಡ ಒಬ್ಬ ಶಿಕ್ಷಕ ಎಂದು ಹೇಳಿಕೊಳ್ಳಲು ಬಹಳ ಹೆಮ್ಮೆಯಿದೆ. ವಿದ್ಯಾರ್ಥಿಗಳ ಜೀವನ ರೂಪಿಸುವಂತಹ ಹಾಗೂ ವ್ಯಕ್ತಿತ್ವ ಬೆಳೆಸುವಂತಹ ವೃತ್ತಿ ಮಾಡಿರುವುದು ಖುಷಿಯ ಸಂಗತಿಯಾಗಿದೆ ಎಂದರು.

ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 23 ಶಿಕ್ಷಕರಿಗೆ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೀವ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಗಿರೀಶ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *