ಡಿವಿಜಿ ಸುದ್ದಿ, ಬೆಂಗಳೂರು: ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ಸಿಬ್ಬಂದಿಗೆ ಏಪ್ರಿಲ್ ತಿಂಗಳ ವೇತನಕ್ಕೆ ಅಗತ್ಯವಾದ 326 ಕೋಟಿ ಹಣವನ್ನು ಸರ್ಕಾರದಿಂದ ನೇರವಾಗಿ ಪಡೆದು ಎರಡ್ಮೂರು ದಿನಗಳಲ್ಲಿ ನೌಕರರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈ ಬಗ್ಗೆ ನಾನು ಮುಖ್ಯಮಂತ್ರಿ ಬಳಿ ಈ ಬಗ್ಗೆ ಮಾತನಾಡಿದ್ದೇನೆ. ಸಾರಿಗೆ ಇಲಾಖೆ ಸಿಬ್ಬಂದಿ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನಾಲ್ಕು ದಿನಗಳಿಂದ 3,500 ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಲಾಗಿದೆ. ಸಾರಿಗೆ ಸಿಬ್ಬಂದಿ ಭಯಪಡದೇ ಕಾರ್ಯನಿ ರ್ವಹಿಸುತ್ತಿದ್ದಾರೆ. ಗುರುವಾರ ಕೊನೆಯದಾಗಿ ಉಚಿತವಾಗಿ ಕಾರ್ಮಿಕರನ್ನು ಕಳುಹಿಸುವ ಕೆಲಸ ಮಾಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.



