ಡಿವಿಜಿ ಸುದ್ದಿ, ಉಚ್ಚಂಗಿದುರ್ಗ: ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ 74ನೇ ಸ್ವಾತಂತ್ರ್ಯ ದಿನದಂದು ಉಚ್ಚಂಗೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಿಗೆ ತ್ರಿವರ್ಣ ಧ್ವಜದಿಂದ ಅಲಂಕರಿಸಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.

ಕೇಸರಿ ಬಿಳಿ ಹಸಿರು ಬಣ್ಣದ ಸೀರೆ, ಹತ್ತಾರು ತ್ರಿವರ್ಣ ಧ್ವಜದಿಂದ ದೇವಿಯನ್ನು ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ವಿಶೇಷ ಪೂಜೆ ಮೂಲಕ ಐತಿಹಾಸಿಕ ಪುಣ್ಯಕ್ಷೇತ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

https://www.facebook.com/permalink.php?story_fbid=304587580968124&id=105586904201527



