ಡಿವಿಜಿ ಸುದ್ದಿ, ಉಡುಪಿ: ಪ್ರವಾಸಿ ಬಸ್ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಏಳು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳ ಬಳಿ ನಡೆದಿದೆ. ಮೈಸೂರಿನಿಂದ ಮಂಗಳೂರಿಗೆ ಪ್ರವಾಸ ತೆರಳುವಾಗ ಈ ಅಪಘಾತ ಸಂಭವಿಸಿದೆ.
ಉಡುಪಿ-ಚಿಕ್ಕಮಗಳೂರು ಘಾಟಿ ರಸ್ತೆಯಲ್ಲಿ ಬಸ್ ಬಂಡೆಗೆ ಡಿಕ್ಕಿ ಹೊಡೆದಿದ್ದು, ಬಸ್ಸಿನಲ್ಲಿದ್ದ 35 ಪ್ರವಾಸಿಗರ ಪೈಕಿ 7 ಜನರು ಸಾವನ್ನಪ್ಪಿದ್ದಾರೆ. ಉಳಿದವರು ಗಾಯಗೊಂಡಿದ್ದಾರೆ.
ಬಸ್ ಮುಂಭಾಗ ಕುಳಿತಿದ್ದ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಸದ್ಯ ಗಾಯಾಳುಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆ ಚಿಕಿತ್ಸೆ ನೀಡಲಾಗುತ್ತಿದೆ.



