ಡಿವಿಜಿ ಸುದ್ದಿ, ಉಡುಪಿ: ಪುತ್ತಿಗೆ ಸ್ವಾಮೀಜಿಗೆ ಕೊರೊನಾ ಸೋಂಕು ಬಂದಿರುವ ಹಿನ್ನೆಲೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಮಧ್ಯೆಯೇ ನಿತ್ಯ ಪೂಜೆಯಲ್ಲಿ ತೊಡಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೂ ನಿತ್ಯ ಜಪ ಅನುಷ್ಠಾನಗಳಲ್ಲಿ ಪುತ್ತಿಗೆ ಶ್ರೀಗಳು ತೊಡಗಿಸಿಕೊಂಡಿದ್ದಾರೆ. ಉಡುಪಿ ಮಾತ್ರವಲ್ಲ ಅನೇಕ ಕಡೆ ಶಾಖಾಮಠ ಹೊಂದಿರುವ ಸ್ವಾಮೀಜಿ ಈ ಬಾರಿ ಉಡುಪಿಯಲ್ಲೇ ಚಾತುರ್ಮಾಸ್ಯ ವೃತ ಕೈಗೊಂಡಿದ್ದರು.

ಚಾತುರ್ಮಾಸ್ಯಕ್ಕೆ ಸಂಕಲ್ಪ ಮಾಡಿದ್ದ ಸಮಯದಲ್ಲಿ ಜ್ವರ ಮತ್ತು ಶೀತದ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಪಿಇ ಕಿಟ್ ಧರಿಸಿಕೊಂಡೇ ಶ್ರೀಗಳ ಶಿಷ್ಯರು ಸ್ವಾಮೀಜಿಯ ಪೂಜೆಗೆ ಸಹಕರಿಸುತ್ತಿದ್ದಾರೆ.
ಶ್ರೀಗಳ ಆರೋಗ್ಯ ಚೆನ್ನಾಗಿದೆ. ಇನ್ನು ಒಂದು ವಾರಗಳ ಕಾಲ ಅವರು ಆಸ್ಪತ್ರೆಯಲ್ಲಿ ಇರಬೇಕಾಗಬಹುದು. ಭಕ್ತರು ಆತಂಕಪಡುವ ಅಗತ್ಯ ಇಲ್ಲ ಎಂದು ಕೆಎಂಸಿ ವೈದ್ಯರು ಹೇಳಿದ್ದಾರೆ.



