Connect with us

Dvgsuddi Kannada | online news portal | Kannada news online

ಕನ್ನಡದಲ್ಲಿಯೇ ಯುಪಿಎಸ್ ಸಿ ಪರೀಕ್ಷೆ ಬರೆದು, 594ನೇ  ರ‍್ಯಾಂಕ್ ಪಡೆದ ಹಾಸನದ ಯುವಕ

Home

ಕನ್ನಡದಲ್ಲಿಯೇ ಯುಪಿಎಸ್ ಸಿ ಪರೀಕ್ಷೆ ಬರೆದು, 594ನೇ  ರ‍್ಯಾಂಕ್ ಪಡೆದ ಹಾಸನದ ಯುವಕ

ಡಿವಿಜಿ ಸುದ್ದಿ, ಹಾಸನ: ಕನ್ನಡದಲ್ಲೇ ಯುಪಿಎಸ್‍ಸಿ ಪರೀಕ್ಷೆ ಬರೆದ ಹಾಸನದ ಯುವಕ 594 ನೇ ರ‍್ಯಾಂಕ್ ಪಡೆದು ಇಡೀ ಹಾಸನ ಜಿಲ್ಲೆ  ಕೀರ್ತಿ ಹೆಚ್ಚಿಸಿದ್ದಾರೆ.

ಜಿಲ್ಲೆಯ ಅರಸೀಕೆರೆ ತಾಲೂಕಿನ ಹರಳಕಟ್ಟೆ ಗ್ರಾಮದ ಯುವಕ ದರ್ಶನ್ 594 ನೇ ರ‍್ಯಾಂಕ್ ಪಡೆದು ಯುಪಿಎಸ್ ಸಿ ಪರೀಕ್ಷೆ ಪಾಸ್ ಆಗಿದ್ದಾನೆ.  ದರ್ಶನ್ ಒಂದರಿಂದ ನಾಲ್ಕನೇ ತರಗತಿಯವರೆಗೆ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ ಮುಗಿಸಿದ್ದು,  ನಂತರ 5ನೇ ತರಗತಿಯಿಂದ 8ನೇ ತರಗತಿವರೆಗೆ ರಾಷ್ಟ್ರೋತ್ತಾನ ಶಾಲೆಯಲ್ಲಿ ಓದಿದ್ದು, 9 ರಿಂದ 10ನೇ ತರಗತಿವರೆಗೆ ತಿಪಟೂರಿನ ಎಸ್‍ವಿಪಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾನೆ.

2009ರಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಗಿಸಿದ ದರ್ಶನ್ ಇನ್ಫೋಸಿಸ್‍ನಲ್ಲಿ ಸುಮಾರು ಆರು ವರ್ಷ, ಎರಡೂವರೆ ವರ್ಷ ಅಮೆರಿಕಾದಲ್ಲೂ ಕೆಲಸ ಮಾಡಿದ್ದಾರೆ.  ಕೆಲಸ ಬಿಟ್ಟು ಯುಪಿಎಸ್‍ಸಿ ತಯಾರಿ ನಡೆಸಿದ್ದರು.

ಇದೀಗ ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್‍ಸಿ ಪರೀಕ್ಷೆ ಪಾಸ್ ಮಾಡುವಲ್ಲಿ ದರ್ಶನ್ ಸಫಲರಾಗಿದ್ದಾರೆ. ಒಂದರಿಂದ ಎಂಟನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ್ದ ದರ್ಶನ್, ಈ ಬಾರಿ ಯುಪಿಎಸ್‍ಸಿ ಆಯ್ಕೆಯಾದವರಲ್ಲಿ ಕನ್ನಡದಲ್ಲೇ ಪರೀಕ್ಷೆ ಬರೆದು ಆಯ್ಕೆಯಾದ ಏಕೈಕ ಯುವಕರಾಗಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

To Top