ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ ಗಳು ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಕೊರೊನಾ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಆಸ್ಪತ್ರೆ ಸಿಬ್ಬಂದಿ, ಪೊಲೀಸರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆರಿಗೆ ಕೊರೊನಾ ವೈರಸ್ ಬಂದು ಮೃತಪಟ್ಟರೆ 30 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.



