Connect with us

Dvgsuddi Kannada | online news portal | Kannada news online

ಯತ್ನಾಳ್ ,ರೇಣುಕಾಚಾರ್ಯ ವಿರುದ್ಧ  ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಪ್ರಮುಖ ಸುದ್ದಿ

ಯತ್ನಾಳ್ ,ರೇಣುಕಾಚಾರ್ಯ ವಿರುದ್ಧ  ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಡಿವಿಜಿ ಸುದ್ದಿ, ಬೆಂಗಳೂರು: ಅಲ್ಪ ಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು  ಶಾಸಕ ಬಸನಗೌಡ ಪಾಟೀಲ್  ಯತ್ನಾಳ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಿಜಾಮುದ್ದೀನ್‍ಗೆ ಹೋಗಿ ಬಂದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಿ. ಇದಕ್ಕೆ ನಮ್ಮ ತಕರಾರು ಇಲ್ಲ. ಒಂದು ವೇಳೆ ನಿಜಾಮುದ್ದೀನ್‍ಗೆ ಹೋಗಿ ಬಂದವರ ಪೈಕಿ ಯಾರಾದರೂ ದುರುದ್ದೇಶಪೂರ್ವಕವಾಗಿ ನೀಡದ್ದೇ ಇದ್ದರೆ ಅವರ ವಿರುದ್ಧ ಕ್ರಮ ಜರುಗಿಸಲಿ. ಆದರೆ, ಆ ವರ್ಗದವರನ್ನೇ ಗುರಿಯಾಗಿಟ್ಟುಕೊಂಡು ಆರೋಪ ಮಾಡುವುದು ಸರಿಯಲ್ಲ. ಇಡೀ ಸಮುದಾಯದವರನ್ನು ತಪ್ಪಿತಸ್ಥರಂತೆ ಕಾಣವುದು ದುರುದ್ದೇಶಪೂರ್ವಕವಾದ ನಡವಳಿಕೆ  ಎಂದರು.

ರೇಣುಕಾಚಾರ್ಯ ಮತ್ತು ಯತ್ನಾಳ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ನಿಜಾಮುದ್ದೀನ್‍ಗೆ ಹೋಗಿ ಬಂದವರನ್ನು ಗುಂಡಿಟ್ಟು ಕೊಲ್ಲಿ ಎಂದಿದ್ದಾರೆ. ಈ ಇಬ್ಬರ ಮೇಲೂ ಕ್ರಿಮಿನಲ್ ಕೇಸು ದಾಖಲಿಸಬೇಕು. ಬಂಧಿಸಬೇಕು‌. ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಬೇಕು‌ ಎಂದು ಒತ್ತಾಯಿಸಿದರು.

 ಶಾಸಕರಾದವರು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಖಂಡನೀಯ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top