ಡಿವಿಜಿಸುದ್ದಿ.ಕಾಂ
ದಾವಣಗೆರೆ: ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ, ಸಾಗಾಣಿಕೆ, ಸಂಗ್ರಹಣೆ, ಉತ್ಪಾದನೆ ಮತ್ತು ಮಾರಾಟವನ್ನು ಸೆಪ್ಟೆಂಬರ್ 01 ರಿಂದ ಕಟ್ಟುನಿಟಾಗಿ ಜಾರಿಗೆ ಬರುವಂತೆ ಮಹಾನಗರ ಪಾಲಿಕೆ ಸಂಪೂರ್ಣವಾಗಿ ನಿಷೇಧಿಸಿದೆ.
ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ಮತ್ತು ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸ್ಥಳದಲ್ಲೇ ಪರಿಸರ ಸಂರಕ್ಷಣಾ ಕಾಯ್ದೆ 1981, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು 2016 ಕಾನೂನು ಮತ್ತು ನಿಯಮಗಳ ಪ್ರಕಾರ ದಂಡ ವಿಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ಹೇಳಿದ್ದಾರೆ.



