ಡಿವಿಜಿಸುದ್ದಿ.ಕಾಂ,ದಾವಣಗೆರೆ: ನಿನ್ನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾನು ತಂತಿ ಮೇಲೆ ನಡೆಯುತ್ತಿದ್ದೇನೆ ಅನ್ನೋ ಹೇಳಿಕೆ ರಾಜ್ಯ ರಾಜ್ಯ ರಾಜಕರಣದಲ್ಲಿ ಸಂಚಲ ಮೂಡಿಸಿತ್ತು. ಈ ವಿಚಾರ ಬಗ್ಗೆ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ದಾವಣಗೆರೆಯಲ್ಲಿ ಮಾತನಾಡಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು , ಹೋರಾಟದ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ಅಧಿಕಾರ ಇರಲಿ ಅಥವಾ ಅಧಿಕಾರ ಇಲ್ಲದಿದ್ದಾಗಲೂ ಹೋರಾಟ ಮಾಡಿದ್ದಾರೆ.
ಯಡಿಯೂರಪ್ಪ ಅವರು ಹೋರಾಟದ ಛಲಗಾರರು. ಪ್ರತಿಪಕ್ಷದಲ್ಲಿ ಇರಲಿ, ಸಿಎಂ ಆಗಿರಲಿ ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದರಿಂದ ತಂತಿ ಮೇಲೆ ನಡೆಯುತ್ತಿದ್ದೇನೆ ಎನ್ನುವ ಹೇಳಿಕೆ ನೀಡಿರಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ವಿಜೇಂದ್ರ ಹೇಳಿದ್ರು.