ಡಿವಿಜಿ ಸುದ್ದಿ.ಕಾಂ: ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ರಾಜ್ಯದಲ್ಲಿ ವಾರಂತ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಮಳೆಯಾಗುತ್ತಿದ್ದು ಕಲಬುರಗಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಈ ವಾರ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ ಇದೆ. ಮುಂದಿನ ಎರಡು ದಿನ ರಾಜ್ಯಾದ್ಯಂತ ಭಾರಿ ಮಳೆ ನಿರೀಕ್ಷೆ ಇದ್ದು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಹೈಅಲರ್ಟ್ ಘೋಷಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎರಡು ದಿನದಿಂದ ಕೊಪ್ಪಳ, ತುಮಕೂರು, ಬೆಂಗಳೂರು, ಮಂಡ್ಯ, ಬಳ್ಳಾರಿ, ಕಲಬುರಗಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಇದಲ್ಲದೆ ಬೆಂಗಳೂರು, ಕಲಬುರಗಿಯಲ್ಲಿ ಕೂಡ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂಉ ಮುನ್ಸೂಚನೆ ನೀಡಲಾಗಿದೆ.



