ಡಿವಿಜಿಸುದ್ದಿ.ಕಾಂ, ದಾವಣಗೆರೆ: ಕಾನೂನು ಎಲ್ಲಾರಿಗೂ ಒಂದೆಯಾಗಿದ್ದು, ಬಿಜೆಪಿ ಯಾವತ್ತು ಸೇಡಿನ ರಾಜಕಾರಣ ಮಾಡಿಲ್ಲ. ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನದಕ್ಕೂ ಬಿಜೆಪಿಗೂ ಸಂಬಂಧವಿಲ್ಲವೆಂದು ಮುಖ್ಯಮಂತ್ರಿ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ದಾವಣಗೆರೆಯ ರೇಣುಕಾ ಮಂದಿರದಲ್ಲಿ `ಒಂದು ದೇಶ ಒಂದು ಸಂವಿಧಾನ’ ವಿಚಾರ ಸಂಕಿರಣದಲ್ಲಿ ಭಾಗಿಯಾದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಬಗ್ಗೆ ನಮಗೆ ಅನುಕಂಪ ಇದೆ. ಮುಂದೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವವರು. ಅವರ ಬೆಳವಣಿಗೆ ಸಹಿಸದ ಕಾಂಗ್ರೆಸ್ ಪಕ್ಷದ ಲೀಡರ್‌ಗಳೇ ಅವರನ್ನು ಇಡಿ ಬಲೆಗೆ ಸಿಲುಕಿಸಿದ್ದಾರೆ ಎಂದರು.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಕಾಂಗ್ರೆಸ್ ಪಕ್ಷದವರೇ ತುಳಿಯುತ್ತಿದ್ದಾರೆ. ಲೋಕಸಭಾ ಚುನಾವಣೆ ಸೋತ ನಂತರ ಅವರ ವಿರುದ್ಧ ಹೋರಾಟ ಮಾಡಿ ಮಹಿಳಾ ಆಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ರು ಎಂದು ಕುಟುಕಿದರು. ಬಿಜೆಪಿ ಜನಾದೇಶದಿಂದ ಅಧಿಕಾರಕ್ಕೆ ಬಂದಿತ್ತು. ಆದ್ರೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮಾಡಿಕೊಂಡು ಕೊನೆಗೆ ಏನಾಯ್ತು ಎಂಬುದನ್ನು ನೋಡಿದ್ದೇವೆ. ಕಾಂಗ್ರೆಸ್-ಜೆಡಿಎಸ್‌ನವರು ಬೇಕಾದಾಗ ಅಪ್ಪಿಕೊಳ್ಳುತ್ತಾರೆ. ಬೇಡಾವೆಂದಾಗ ದೂರ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.



