ಡಿವಿಜಿ ಸುದ್ದಿ.ಕಾಂ, ಸಿರಿಗೆರೆ: ವೀರಶೈವ ಸಮಾಜವನ್ನು ಒಂದುಗೂಡಿಸುವ ಜವಾಬ್ದಾರಿಯನ್ನು ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಿಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದರು.
ಸಿರಿಗೆರೆಯ ತರಳಬಾಳು ಮಠದ ಲಿಂ. ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 27 ಶ್ರದ್ಧಾಂಜಲಿ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಈ ಸಮಾಜದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ಸ್ವಲ್ಪ ದಿನದಲ್ಲಿ ಕೆಲವರು ಸಮಾಜ ಒಡೆಯುವ ಕೆಲಸಕ್ಕೆ ಕೈ ಹಾಕಿದರು. ಇದರ ಪರಿಣಾಮ ಯಾರು ಕೈ ಸುಟ್ಟುಕೊಂಡರು ಎಂಬುದು ಎಲ್ಲರಿಗೂ ಗೊತ್ತಿದೆ ಎನ್ನುವ ಮೂಲಕ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.