ದಾವಣಗೆರೆ: ರಾಜ್ಯ ಸರ್ಕಾರ ಜಾತಿಗಣತಿ ( caste census) ವರದಿ ಬಿಡುಗಡೆ ಬಗ್ಗೆ ನನಗೆ ಮಾಹಿತಿ ಇಲ್ಲ. ವರದಿ ಬಿಡುಗಡೆ ಮಾಡುವುದಾದರೆ ಮಾಡಲಿ. ಈ ಬಗ್ಗೆ ನಂತರ ಮಾತನಾಡುತ್ತೇನೆಂದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ , ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲು ಜಾತಿಗಣತಿ ವರದಿ ಬಿಡುಗಡೆ ಮಾಡಲಿ ನೋಡೋಣ ಏನು ಇದೆ ಅಂತ. ವರದಿ ಬಗ್ಗೆ ನಮಗೂ ಸಂಪೂರ್ಣ ಮಾಹಿತಿ ಇಲ್ಲ. ಮುಖ್ಯಮಂತ್ರಿ ಜಾತಿಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಬಿಡುಗಡೆಯಾದ ನಂತರ ಚರ್ಚೆ ಮಾಡಿ ಮಾತನಾಡುತ್ತೇನೆ ಎಂದರು.