ಡಿವಿಜಿಸುದ್ದಿ.ಕಾಂ ದಾವಣಗೆರೆ:ತರಳಬಾಳು ಬೃಹನ್ಮಠದಲ್ಲಿ ನಾಳೆ ನಡೆಯಲಿರುವ ಲಿಂ. ಶ್ರೀ ಶಿವಕುಮಾರ ಶಿವಾಚಾರ್ಯರ ಸ್ವಾಮೀಜಿಗಳ 27ನೇ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಾಗಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇವತ್ತೇ ವಿವಿಧ ಊರುಗಳಿಂದ ಭಕ್ತಾಧಿಗಳು ಆಗಮಿಸಲಿದ್ದು, ಭಕ್ತಾಧಿಗಳು ಉಳಿದುಕೊಳ್ಳಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇಂದು ಸಂಜೆ ೪ ಗಂಟೆಗೆ ಲಿಂ.ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡೊಳ್ಳು, ಭಜನೆ ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಮೆರವಣಿಗೆ ಸಿರಿಗೆರೆಯ ಪ್ರಮುಖ ಬೀದಿಯಲ್ಲಿ ನಡೆಯಲಿದೆ. ಸಂಜೆ 7ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ನಡೆಸಿಕೊಡದ್ದಾರೆ.
ಇನ್ನು ನಾಳೆ ಬೆಳಗ್ಗೆ 10. ಗಂಟೆಗೆ ಶ್ರದ್ಧಾಂಜಲಿ ಕಾರ್ಯಕ್ರಮ ಉದ್ಘಾಟನೆ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿಕೊಳ್ಳಲಿದ್ದಾರೆ. ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧ ಭಾಗದ ಶಾಸಕರು ಭಾಗಿಯಾಗಲಿದ್ದಾರೆ.