Connect with us

Dvg Suddi-Kannada News

ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ: ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ

ದಾವಣಗೆರೆ

ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ: ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಾಳೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಆಯೋಜಿಸಿದ್ದು, ನಿವೃತ್ತ ಮತ್ತು ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನಿಸಲಾಗುವುದು. ನಾಳೆ ಬೆಳಿಗ್ಗೆ ೧೦.೩೦ ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದ ಜಿ.ಎಂ ಸಿದ್ದೇಶ್ವರ ನೆರವೇರಿಸಲಿದ್ದು, ಶಾಸಕ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಶೈಲಜಾ ಬಸವರಾಜ್ ಇವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರ ಅನಾವರಣಗೊಳಿಸಲಿದ್ದಾರೆ. ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಚಿತ್ರಕಲಾ ಪ್ರದರ್ಶನದ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಪನಹಳ್ಳಿ ಮಾಯಕೊಂಡ, ಹರಿಹರ ಶಾಸಕರು, ಹಾಗೂ ವಿಧಾನ ಪರಿಷತ್ ಶಾಸಕರು, ಜಿ.ಪಂ ಉಪಾಧ್ಯಕ್ಷರು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು, ತಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಭಾಗವಹಿಸಲಿದ್ದಾರೆ.

ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಚ್.ಎಸ್ ಮಂಜುನಾಥ್ ಕುರ್ಕಿ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336,7483892205

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top