ಡಿವಿಜಿಸುದ್ದಿ.ಕಾಂ ಬೆಂಗಳೂರು: ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದ ನಿಯೋಗವು, ಇಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪರಿಶಿಷ್ಟ ಪಂಗಡಕ್ಕೆ ಶೇ. ೭.೫ ರಷ್ಟು ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ಈಡೇರಿಸುವ ವಿಶ್ವಾಸ ನೀಡಿದರು.

ಮುಖ್ಯಮಂತ್ರಿ ನಿವಾಸ ಕೃಷ್ಣದಲ್ಲಿ ಈ ಮನವಿಯನ್ನು ಸಲ್ಲಿಸಲಾಯಿತು. ಡಿಸಿಎಂ ಗೋವಿಂದ ಕಾರಜೋಳ, ಸಚಿವ ಶ್ರೀರಾಮುಲು, ಶಾಸಕರಾದ ರಾಜುಗೌಡ, ಶಿವನಗೌಡ ನಾಯಕ್, ಎಸ್.ಎ. ರಾಮಚಂದ್ರಪ್ಪ, ಮಾಜಿ ಶಾಸಕ ಬಿ.ಪಿ. ಹರೀಶ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: : 9844460336, 7483892205



